Thursday, October 10, 2024
spot_imgspot_img
spot_imgspot_img

ಮಂಗಳೂರು : ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು ಪ್ರಕರಣ : ಕಾಸ್ಮೆಟಿಕ್ ಕ್ಲಿನಿಕ್‌ಗೆ ಬೀಗ ಜಡಿದ ಆರೋಗ್ಯ ಇಲಾಖೆ

- Advertisement -
- Advertisement -

ಮಂಗಳೂರು : ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ಯುವಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಗರದ ಕಂಕನಾಡಿಯ ಬೆಂದೂರ್‌ವೆಲ್‌ನ ಫೋಂಟ್ ಕಾಸ್ಮಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್‌ಪ್ಲೆಂಟ್ ಕ್ಲಿನಿಕ್‌ನ್ನು ಆರೋಗ್ಯ ಇಲಾಖೆ ತಾತ್ಕಾಲಿಕವಾಗಿ ಬಂದ್ ಮಾಡಿದೆ.

ಕಾಸ್ಮಟಿಕ್ ಸರ್ಜರಿಗೆ ತೆರಳಿದ್ದ ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ನಿರ್ದೇಶನದಂತೆ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಅವರು ಫ್ಲೋಂಟ್ ಕಾಸ್ಕೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್‌ಪ್ಲೆಂಟ್ ಕ್ಲಿನಿಕ್‌ನ್ನು ಬಂದ್ ಮಾಡಿಸಿದ್ದಾರೆ.

ಮೃತ ಮೊಹಮ್ಮದ್ ಮಝಿನ್‌ಗೆ ಶಸ್ತ್ರಚಿಕಿತ್ಸೆಗೆ ಮುನ್ನ ಅನಸ್ತಾಸಿಯಾ ನೀಡಿದ ವೈದ್ಯರ ನಿರ್ಲಕ್ಷ್ಯ ಮತ್ತು ಅವರ ವರದಿಯು ವಿವಿಧ ಎಲೆಕ್ಟ್ರಾನಿಕ್, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಚಾಲ್ತಿಯಲ್ಲಿದೆ ಎಂದು ಮೃತ ಮೊಹಮ್ಮದ್ ಮಜಿನ್ ಅವರ ಕುಟುಂಬ ಸದಸ್ಯರು ಆರೋಪಿಸಿದ ನಂತರ ಆರೋಗ್ಯ ಇಲಾಖೆ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿದೆ.

- Advertisement -

Related news

error: Content is protected !!