Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ವಿದ್ಯುತ್ ಶಾಕ್ ತಗುಲಿ ಯುವಕ‌ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಜು.15ರ ಸೋಮವಾರ ನಡೆದಿದೆ.

ಇಳಂತಿಲ ಗ್ರಾಮದ ಗೋಳಿದಡಿ ಹರೀಶ್ ಗೌಡ(35) ಮೃತ ಯುವಕ.

ತಮ್ಮ ಮನೆಯ ಸಮೀಪವೇ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದು ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!