Thursday, June 18, 2026
spot_imgspot_img
spot_imgspot_img

ಬಂಟ್ವಾಳ: ಯುವಕನಿಗೆ ಚೂರಿ ಇರಿತ ಪ್ರಕರಣ: ಆರೋಪಿ ಅರೆಸ್ಟ್‌

- Advertisement -
- Advertisement -

ಬಂಟ್ವಾಳ : ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಬಂಟ್ವಾಳದ ಬಡ್ಡಕಟ್ಟೆ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಎಂದು ಗುರುತಿಸಲಾಗಿದೆ.

ರವಿ ಹಾಗೂ ಪುಷ್ಪರಾಜ್ ಎಂಬವರ ನಡುವೆ ಗಲಾಟೆ ನಡೆದು, ಆರೋಪಿ ರವಿ ಎಂಬಾತನು ಪುಷ್ಪರಾಜ್ ರವರಿಗೆ ಚೂರಿಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದನು. ಘಟನೆ ಬಳಿಕ ಆರೋಪಿ ರವಿ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿ ಪರಾರಿಯಾಗಿದ್ದು, ಇದೀಗ ಘಟನೆ ನಡೆದ ನಾಲ್ಕು ದಿನಗಳ ಬಳಿಕ ಕಾವಳಕಟ್ಟೆ ಎಂಬಲ್ಲಿಂದ ಪೊಲೀಸರು ವಶಕ್ಕೆ ಪಡೆದುಕೊಂಡು ಘಟನೆಗೆ ಸಂಬಂಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!