- Advertisement -
- Advertisement -
ಆಲಂಕಾರು: ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಸಮೀಪದ ಕುಂಡಾಜೆ ಎಂಬಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ.
ಕುಂಡಾಜೆ ಸೇತುವೆಯ ತಿರುವಿನಲ್ಲಿ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬಲೆನೋ ಕಾರು ಹಾಗೂ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಆಲ್ಟೋ 800 ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಬಂದ ಕಡಬ ಠಾಣಾ ಎಸ್ಐ ರುಕ್ಮನಾಯ್ಕ್, ಎಎಸ್ಐ ಸುರೇಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.
- Advertisement -