Thursday, July 30, 2026
spot_imgspot_img
spot_imgspot_img

ಇಂಜೆಕ್ಷನ್ ನೀಡಿದ ಕೆಲವೇ ಗಂಟೆಗಳಲ್ಲಿ ಬಾಲಕ ಸಾವು; ನರ್ಸ್ ನ ಬಂಧನ

- Advertisement -
- Advertisement -

ಚೆನ್ನೈ: ಖಾಸಗಿ ಕ್ಲಿನಿಕ್‌ನಲ್ಲಿ ಇಂಜೆಕ್ಷನ್ ಪಡೆದ ಕೆಲವೇ ಗಂಟೆಗಳಲ್ಲಿ ಬಾಲಕ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಕವಿ ದೇವನಾಥನ್‌ (6) ಮೃತಪಟ್ಟ ಬಾಲಕ. ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕನನ್ನು ತಂದೆ ಮಹೇಶ್ವರನ್ ಅವರು ಸ್ಥಳೀಯ ಕ್ಲಿನಿಕ್‌ಗೆ ಕರೆದೊಯ್ದಿದ್ದರು. ಕ್ಲಿನಿಕ್‌ನಲ್ಲಿ ನರ್ಸ್ ಬಾಲಕನಿಗೆ ಇಂಜೆಕ್ಷನ್ ನೀಡಿದ್ದರು. ಆದರೆ ಇಂಜೆಕ್ಷನ್ ನೀಡಿದ ಕೆಲವೇ ಗಂಟೆಗಳಲ್ಲಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಇಂಜೆಕ್ಷನ್ ನೀಡಿದ ನರ್ಸ್‌ ಕ್ಯಾಥರಿನ್ ಎಂಬಾಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

- Advertisement -

Related news

error: Content is protected !!