Monday, August 31, 2026
spot_imgspot_img
spot_imgspot_img

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನ್ಮದಿನ; ಸಿಎಂ ನೇತೃತ್ವದ ಸರ್ಕಾರಕ್ಕೆ ಆರು ತಿಂಗಳು

- Advertisement -
- Advertisement -
vtv vitla
vtv vitla

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಇಂದು ಆರು ತಿಂಗಳು ಪೂರ್ಣಗೊಳ್ಳಲಿವೆ. ಹಾಗೆಯೇ ಇವರ ಹುಟ್ಟು ಹಬ್ಬವು ಸಹಿತ ಇಂದೇ ಆಗಿದೆ. ಇಂದು 62ನೇ ವಸಂತಕ್ಕೆ ಬಸವರಾಜ ಬೊಮ್ಮಾಯಿ ಕಾಲಿಡಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಹುಟ್ಟುಹಬ್ಬದ ಅಂಗವಾಗಿ ಆರ್ ಟಿ ನಗರ್ ನಿವಾಸದಲ್ಲಿ ಹಸು ಮತ್ತು ಕರುವಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳ ಹುಟ್ಟುಹಬ್ಬ ಯಾವ ರೀತಿ ಆಚರಿಸಲಾಗುವುದು ಎನ್ನುವ ಮಾಧ್ಯಮದವರ ಪ್ರಶ್ನೆಗೆ ‘ಹುಟ್ಟುಹಬ್ಬವನ್ನು ಎಂದೂ ಆಚರಿಸಿಕೊಂಡಿಲ್ಲ. ಹಾಗಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ’ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಬೊಮ್ಮಾಯಿ ನೇತೃತ್ವದ ಸರ್ಕಾರ ಆರು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಇಂದು ಸರ್ಕಾರದ ಸಾಧನೆಗಳನ್ನು ಒಳಗೊಂಡ ‘ಭವ್ಯ ಭವಿಷ್ಯದ ಭರವಸೆಯ ಹೆಜ್ಜೆಗಳು’ ಎಂಬ ಶೀರ್ಷಿಕೆಯುಳ್ಳ ಸಾಧನಾ ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದಾರೆ.

- Advertisement -

Related news

error: Content is protected !!