Tuesday, July 28, 2026
spot_imgspot_img
spot_imgspot_img

ಈಶ್ವರಪ್ಪ ಅವರನ್ನು ಸಂಪುಟದಿಂದ ಕಿತ್ತು ಕೊಲೆ ಪ್ರಕರಣ ದಾಖಲಿಸಿ: ರಮನಾಥ ರೈ

- Advertisement -
- Advertisement -
vtv vitla

ಮಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಪರ್ಸೆಂಟೇಜ್ ಕಮಿಷನ್ ನಿಂದ ನೊಂದು ತನ್ನ ಆತ್ಮಹತ್ಯೆಗೆ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟ ಕಾರಣ ಇದು ಹತ್ಯೆಗೆ ಸಮಾನವಾಗಿದ್ದು ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕಿತ್ತು ಹಾಕುವುದು ಮಾತ್ರವಲ್ಲದೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ರಮನಾಥ್ ರೈ ಒತ್ತಾಯಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಆರೋಪ ಮಾಡಿದ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಈಶ್ವರಪ್ಪ ಅವರನ್ನು ಬಂಧಿಸಿ ಜೈಲಿಗಟ್ಟಬೇಕು. ಡಿವೈಎಸ್ಪಿ ಗಣಪತಿ ವಿಚಾರದಲ್ಲಿ ಕಾಂಗ್ರೆಸ್ ಪ್ರಕರಣ ಸಿಬಿಐ ತನಿಖೆಗೆ ವಹಿಸಿತ್ತು ಆರೋಪಿತರ ರಾಜೀನಾಮೆ ಪಡೆದಿತ್ತು ಆದರೆ ಇದಕ್ಕೂ ಯಾವುದೇ ಹೋಲಿಕೆ ಮಾಡಲಾಗದು ಮಾನಸಿಕವಾಗಿ ಯಾವುದೇ ಒತ್ತಡವಿಲ್ಲದೆ ಸಂತೋಷ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಗಂಭೀರ ಪ್ರಕರಣ ಎಂದು ಪ್ರತಿಕ್ರಯಿಸಿದ್ದಾರೆ.

- Advertisement -

Related news

error: Content is protected !!