- Advertisement -
- Advertisement -
ಉಜಿರೆ: ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಪಲ್ಟಿಯಾದ ಘಟನೆ ಶನಿವಾರ ರಾತ್ರಿ 1:45ರ ಸುಮಾರಿಗೆ ಉಜಿರೆ ರಾಜ್ ಲೀಲಾ ರೆಸಿಡೆನ್ಸಿ ಮುಂಭಾಗ ಸಂಭವಿಸಿದೆ.
ಬೆಂಗಳೂರಿನಿಂದ ಧರ್ಮಸ್ಥಳ ದೇವಸ್ಥಾನಕ್ಕೆ ಬರುತ್ತಿದ್ದ ಸ್ವಿಫ್ಟ್ ಕಾರು ರಾತ್ರಿ 1:45 ರ ವೇಳೆಗೆ ಉಜಿರೆ ರಾಜ್ ಲೀಲಾ ರೆಸಿಡೆನ್ಸಿ ಮುಂಭಾಗದಲ್ಲಿ ಚರಂಡಿಗೆ ಪಲ್ಟಿ ಹೊಡೆದಿದೆ. ಚಾಲಕ ನಿದ್ರೆಯ ಮಂಪರಿನಲ್ಲಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಕಾರಿನಲ್ಲಿದ್ದ ಮಹಿಳೆಯ ಕಾಲಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
- Advertisement -