Monday, June 22, 2026
spot_imgspot_img
spot_imgspot_img

ಉಡುಪಿ: ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಚಾಲಕನಿಗೆ 2 ವರ್ಷ ಜೈಲು ಶಿಕ್ಷೆ, ದಂಡ.!

- Advertisement -
- Advertisement -

ಉಡುಪಿ: ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಬಸ್‌ನ್ನು ಚಲಾಯಿಸಿ ಪಾದಚಾರಿಯೊಬ್ಬರ ಸಾವಿಗೆ ಕಾರಣವಾದ ಬಸ್ ಚಾಲಕನಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

ಕೆನರಾ ಟೂರಿಸ್ಟ್ ಬಸ್ಸಿನ ಚಾಲಕ ಪ್ರಭಾಕರ್ ಅವರು ಬಸ್ಸನ್ನು ಅತಿವೇಗದಲ್ಲಿ ಚಲಾಯಿಸಿ ಪುತ್ತೂರು ಸಂತೆಕಟ್ಟೆ ಹೈವೇ ಗ್ಯಾರೇಜ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜನವರಿ 9, 2017 ರಂದು ಬೆಳಿಗ್ಗೆ 5.20 ಕ್ಕೆ ರಸ್ತೆ ಬದಿ ನಿಂತಿದ್ದ ನಾಗರಾಜ್ ಢಿಕ್ಕಿ ಹೊಡೆದ ಪರಿಣಾಮ ನಾಗರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಇನ್ನು ಈ ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಒಂದನೇ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಮೂರ್ತಿ ಶ್ಯಾಮಪ್ರಕಾಶ್ ಅವರು ಪ್ರಭಾಕರ್‌ಗೆ 2 ವರ್ಷದ ಕಾರಾಗೃಹ ವಾಸದ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದ್ದಾರೆ.

- Advertisement -

Related news

error: Content is protected !!