- Advertisement -
- Advertisement -


ಉಡುಪಿ: ಅನಂತನಗರದ ಹುಡ್ಕೋ ಕಾಲೋನಿಯಲ್ಲಿ ಕಳ್ಳರು ಮನೆಯೊಂದಕ್ಕೆ ನುಗ್ಗಿ ಮನೆಯೊಡತಿಗೆ ಇರಿದು ದರೋಡೆಗೈಯಲು ಯತ್ನಿಸಿದಾಗ ಸ್ಥಳೀಯರು ಇಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಫೆ.೧೮ ರ ರಾತ್ರಿ ನಡೆದಿದೆ. ಗಾಯಗೊಂಡ ಮಹಿಳೆ ಸುಮತಿ ರೈ ಎನ್ನಲಾಗಿದೆ
ಕಳ್ಳರೆಂದು ಶಂಕಿಸಲಾದ ಇಬ್ಬರು ವ್ಯಕ್ತಿಗಳು ಮನೆಗೆ ನುಗ್ಗಿ ಮನೆಯಲ್ಲಿದ್ದ ಸುಮತಿ ಅವರಿಗೆ ಚಾಕುವಿನಿಂದ ಇರಿದು ಬೆಲೆಬಾಳುವ ವಸ್ತು ಲೂಟಿ ಮಾಡಿದ್ದಾರೆ. ಹಲ್ಲೆಯಿಂದ ಗಾಯಗೊಂಡು ಕುಸಿದು ಬಿದ್ದ ಸುಮತಿ ರೈ ಅವರನ್ನು ಕಳ್ಳರು ಟ್ರಾವೆಲ್ ಬ್ಯಾಗ್ ನಲ್ಲಿ ತುಂಬಿಸಲೆತ್ನಿಸಿದಾಗ ಪತಿ ದಯಾನಂದ ಮನೆಗೆ ಆಗಮಿಸಿದ್ದಾರೆ. ಈ ವೇಳೆ ದರೋಡೆಕೋರರನ್ನು ಹಿಡಿಯಲು ಪ್ರಯತ್ನಿಸಿದಾಗ ಅವರು ಪರಾರಿಯಾಗಲು ಯತ್ನಿಸಿದ್ದಾರೆ.
ಆಗ ಸ್ಥಳೀಯರು ಕಳ್ಳರಿಬ್ಬರನ್ನು ಬೆನ್ನಟ್ಟಿ ಹಿಡಿದು ಮಣಿಪಾಲ ಪೊಲೀಸರಿಗೆ ಒಪ್ಪಿದ್ದಾರೆ. ಈ ಘಟನೆ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮತಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.


- Advertisement -