Saturday, June 13, 2026
spot_imgspot_img
spot_imgspot_img

ಉಡುಪಿ: ಮಾನಸಿಕ ಖಿನ್ನತೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ

- Advertisement -
- Advertisement -

ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ನಂದಿನಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಶಾಲೆ ಬಳಿಯ ನಿವಾಸಿ ಬಾಲಕೃಷ್ಣ, ಅಮಿನ್ (35) ಎಂದು ಗುರುತಿಸಲಾಗಿದೆ.

ಮೃತ ಬಾಲಕೃಷ್ಣ, ಕಳೆದ ಒಂದು ವಾರದಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ. ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ತೇಜಪಾಲ್ ಹಳೆಯಂಗಡಿ ಮತ್ತಿತರರ ನೆರವಿನಿಂದ ದೋಣಿ ಮೂಲಕ ಶವವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ.

ನಂದಿನಿ ನದಿಯಲ್ಲಿ ಅಪರಿಚಿತ ಶವ ಕಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿರುವ ವಾಹನಗಳ ಸವಾರರು ಕುತೂಹಲದಿಂದ ನೋಡುತ್ತಿದ್ದಾಗ ಕೆಲ ಹೊತ್ತು ಹೆದ್ದಾರಿ ಸಂಚಾರ ವ್ಯತ್ಯಯ ಉಂಟಾಯಿತು.

vtv vitla
vtv vitla
- Advertisement -

Related news

error: Content is protected !!