Monday, June 30, 2025
spot_imgspot_img
spot_imgspot_img

ಉಪ್ಪಿನಂಗಡಿ : ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟ ; ಆಲಂಕಾರು ಮೂಲದ ಕಾರ್ಮಿಕ ಮೃತ್ಯು

- Advertisement -
- Advertisement -

ಉಪ್ಪಿನಂಗಡಿ : ಟಯರ್ ರಿಸೋಲ್ ಸಂಸ್ಥೆಯೊಂದರಲ್ಲಿ ಏರ್ ಕಂಪ್ರೈಸರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ನಲ್ಲಿ ನಡೆದಿದೆ.
ಉಪ್ಪಿನಂಗಡಿ ಗಾಂಧಿ ಪಾರ್ಕ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!