- Advertisement -
- Advertisement -
ಉಪ್ಪಿನಂಗಡಿ: ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ನಡೆದಿದೆ.
ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಎಂದು ಗುರುತಿಸಲಾಗಿದೆ. ಫಯಾಝ್ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಫಯಾಝ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
- Advertisement -