Thursday, June 4, 2026
spot_imgspot_img
spot_imgspot_img

ಉಳ್ಳಾಲ: ಪೊಲೀಸರಿಗೆ ಹಲ್ಲೆಗೈದು ತಪ್ಪಿಸಿಕೊಳ್ಳಲು ಮುಂದಾದ ರೌಡಿಶೀಟರ್‌ ಮೇಲೆ ಫೈರಿಂಗ್

- Advertisement -
- Advertisement -

15ಕ್ಕೂ ಅಧಿಕ ಪ್ರಕರಣ ಇರುವ ರೌಡಿಶೀಟರ್ ಪೊಲೀಸರಿಗೆ ಹಲ್ಲೆಗೈದಯ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಪೊಲೀಸರು ಫೈರಿಂಗ್ ನಡೆಸಿ ನಟೋರಿಯಸ್ ರೌಡಿಯನ್ನು ಬಂಧಿಸಿದ ಘಟನೆ ನಡೆದಿದೆ. ಕೊಣಾಜೆ‌ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬಂದಿ ಗಾಯಗೊಂಡಿದ್ದಾರೆ.

15ಕ್ಕೂ ಅಧಿಕ ಪ್ರಕರಣ ಇರುವ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ನಡೆದಿದೆ. ಫೈರಿಂಗ್ ವೇಳೆ ಉಳ್ಳಾಲ ಠಾಣಾ ಪೊಲೀಸ್ ಸಿಬ್ಬಂದಿ ವಾಸುದೇವ ಹಾಗೂ ಅಕ್ಬರ್ ಎಂಬುವವರು ಗಾಯಗೊಂಡಿದ್ದಾರೆ. ಆರೋಪಿ ಮುಕ್ತರ್ ಹಲವು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಆದರೆ ಪ್ರಕರಣವೊಂದಕ್ಕೆ ಸಂಬಂಧಿಸಿ ಆತನನ್ನು ನಿನ್ನೆ ಉಳ್ಳಾಲ ಪೊಲೀಸರು ಬಂಧಿಸಿದ್ದರು.

ಇಂದು ಮುಂಜಾನೆ ಬೈಕಿನ ಮಹಜರಿಗೆಂದು ಕೊಣಾಜೆ ಬಳಿಯ ಅಸೈಗೋಳಿಗೆ ಕರೆದೊಯ್ದಿದ್ದ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಠಾಣಾಧಿಕಾರಿ ಸಂದೀಪ್ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಕಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಗೊಂಡ ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

- Advertisement -

Related news

error: Content is protected !!