Thursday, September 10, 2026
spot_imgspot_img
spot_imgspot_img

ಉಳ್ಳಾಲ: ರಸ್ತೆ ಅಪಘಾತದಲ್ಲಿ ಗಾಯಗೊಂದಿದ್ದ ವೃದ್ಧ ಮೃತ್ಯು

- Advertisement -
- Advertisement -

ಉಳ್ಳಾಲ: ಉಚ್ಚಿಲ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಗಾಯಗೊಂಡಿದ್ದ ವೃದ್ಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಉಚ್ಚಿಲ ನಿವಾಸಿ ನಾರಾಯಣ ಪೂಜಾರಿ (82) ಮೃತಪಟ್ಟವರು. ಶುಕ್ರವಾರ ಸಂಜೆ ನಾರಾಯಣ ಅವರು ಉಚ್ಚಿಲದಲ್ಲಿ ಹೆದ್ದಾರಿ ದಾಟುತ್ತಿದ್ದ ಸಂದರ್ಭ ಕೇರಳಕ್ಕೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ರವಿವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಪಘಾತ ನಡೆಸಿದ್ದ ಕಾರನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!