Tuesday, June 9, 2026
spot_imgspot_img
spot_imgspot_img

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು; ಗಾಂಜಾ ವ್ಯಸನಿಗಳ ಅಟ್ಟಹಾಸದ ಶಂಕೆ

- Advertisement -
- Advertisement -
vtv vitla

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ತಲಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು ಸಾವಿರಾರು ರೂಪಾಯಿ ಬೆಲೆಬಾಳುವ ಸೊತ್ತುಗಳನ್ನು ಕಳವು ಮಾಡಿದ ಘಟನೆ ನಡೆದಿದೆ.

ಅಶ್ರಫ್, ಕುಲದೀಪ್, ಶ್ರೀಧರ್ ಹಾಗೂ ಮಹಮ್ಮದ್, ಶಂಕರ್ ಎಂಬುವರಿಗೆ ಸೇರಿದ ಅಂಗಡಿಗಳಿಂದ ಸಾವಿರಾರು ರೂಪಾಯಿ ಬೆಲೆಬಾಳುವ ಸಿಗರೇಟ್ ಹಾಗೂ ಡ್ರಾಯರ್‌ನಲ್ಲಿದ್ದ ನಗದು ಕದ್ದೊಯ್ದಿದ್ದಾರೆ. ಅಶ್ರಫ್ ಎಂಬವರಿಗೆ ಸೇರಿದ ಜೆರಾಕ್ಸ್ ಅಂಗಡಿಯಿಂದ ನಗದು ಕಳವಾಗಿದೆ. ರಾತ್ರಿ ವೇಳೆ ಎಲ್ಲಾ ಅಂಗಡಿಗಳ ಬೀಗ ಮುರಿದಿರುವ ಕಳ್ಳರು ಕೈಚಳಕ ತೋರಿಸಿದ್ದಾರೆ. ಕೇರಳದ ಮಂಜೇಶ್ವರ ಹಾಗೂ ಕುಂಜತ್ತೂರು ಭಾಗದಲ್ಲಿಯೂ ಇದೇ ರೀತಿಯ ಕಳವು ಕೃತ್ಯ ನಡೆದಿದ್ದು ಇದೀಗ ತಲಪಾಡಿಗೂ ವ್ಯಾಪಿಸಿದೆ. ಗಡಿಭಾಗ ತಲಪಾಡಿ ಗಾಂಜಾ ವ್ಯಸನಿಗಳ ಅಟ್ಟಹಾಸವೂ ಮಿತಿಮೀರಿದ್ದು , ಮದ್ಯವ್ಯಸನಿಗಳೇ ಕಳವು ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆಯಿದೆ.

- Advertisement -

Related news

error: Content is protected !!