Tuesday, July 8, 2025
spot_imgspot_img
spot_imgspot_img

ಎಪಿಎಂಸಿ ಮಾರುಕಟ್ಟೆಯಲ್ಲಿ ಕರ್ತವ್ಯನಿರತ ಏಜೆಂಟ್’ನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

- Advertisement -
- Advertisement -

ಮೈಸೂರು: ಬಂಡಿಪಾಳ್ಯದ ಎಪಿಎಂಸಿ ಮಾರುಕಟ್ಟೆಯಲ್ಲಿ ಕರ್ತವ್ಯನಿರತ ಏಜೆಂಟ್​ವೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಮೂಲದ ಎಂ.ಜೆ.ರವಿ (35) ಹತ್ಯೆಗೊಳಗಾದ ಯುವಕ.

ಮಂಗಳವಾರ ರಾತ್ರಿ ಎಪಿಎಂಸಿ ಮಳಿಗೆಯಲ್ಲಿ ಕೆಲಸ ಮಾಡುತ್ತಿರುವಾಗ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ರವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರವಿಗೆ ತಂದೆ-ತಾಯಿ, ಪತ್ನಿ ಹಾಗೂ ಮೂವರು ಮಕ್ಕಳು, ಸಹೋದರಿ ಇದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಭೇಟಿ ನೀಡಿದ ಎಎಸ್‌ಪಿ ಶಿವಕುಮಾರ್‌ ಆರ್‌.ದಂಡಿನ, ದಕ್ಷಿಣ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದರು ಕೊಲೆಗಾರರ ಪತ್ತೆಗೆ ಬಲೆ ಬೀಸಿದ್ದಾರೆ.

- Advertisement -

Related news

error: Content is protected !!