Thursday, July 30, 2026
spot_imgspot_img
spot_imgspot_img

ಐಎಎಸ್, ಐಪಿಎಸ್ ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧಿಸಿ; ಪ್ರತಾಪ್​ ಸಿಂಹ ಮನವಿ

- Advertisement -
- Advertisement -

ಮೈಸೂರು: ಐಎಎಸ್, ಐಪಿಎಸ್ ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧಿಸಿ ಎಂದು ಪ್ರತಾಪ್ ಸಿಂಹ ಅವರು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಐಎಎಸ್, ಐಪಿಎಸ್ ಕೆಲವು ಅಧಿಕಾರಿಗಳು ಏನೂ ಕೆಲಸ ಮಾಡದಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಬಿಂಬಿಸಿಕೊಳ್ಳುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಅಧಿಕಾರಿಗಳು ಮಾಡಿದ ಕೆಲಸಗಳನ್ನ ಜಿಲ್ಲೆಯಿಂದ ಒಂದು ಅಕೌಂಟ್ ತೆರೆದು ಅದರಲ್ಲಿ ಮಾಹಿತಿ ಹಾಕಲಿ. ಫ್ಯಾನ್ಸ್ ಫೇಜ್​ಗಳಿಂದ ಹೊಗಳಿಕೆಗಳು ಸೃಷ್ಟಿಯಾಗಿವೆ” ಎಂದಿದ್ದಾರೆ.

ಇನ್ನು ಯಾರೋ ಒಬ್ಬ ಲಾಠಿ ಹಿಡಿದು ಓಡಾಡಿದರೆ ಹಾಗೇ, ಹೀಗೆ ಅಂತ ಬಿಂಬಿಸಲಾಗುತ್ತಿದೆ. ಐಎಎಸ್, ಐಪಿಎಸ್ ಅಧಿಕಾರಿಗಳು ಉತ್ತಮ ಕೆಲಸಗಳನ್ನು ಮಾಡಬೇಕು” ಎಂದು ಹೇಳಿದ್ದಾರೆ.

- Advertisement -

Related news

error: Content is protected !!