Sunday, June 14, 2026
spot_imgspot_img
spot_imgspot_img

ಕಡಬ: ಅಪ್ರಾಪ್ತ ಬಾಲಕಿ ಗರ್ಭಿಣಿಯಾದ ಪ್ರಕರಣ; ಸಂಬಂಧಿಕ ಯುವಕನ ಬಂಧನ..!!

- Advertisement -
- Advertisement -

ಕಡಬ : ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯೋರ್ವಳು ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿ ಲೈಂಗಿಕ ದೌರ್ಜನ್ಯ ಎಸಗಿದ ಬಾಲಕಿಯ ಸಂಬಂಧಿಕನೋರ್ವನನ್ನು ಪೋಕ್ಸೋ ಕಾಯ್ದೆಯಡಿ ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಕೋಡಿಂಬಾಳ ಗ್ರಾಮದ ಪಾಜೋವು ಸಮೀಪದ ರಮೇಶ್ ಎಂಬಾತ ಅಪ್ರಾಪ್ತ ಬಾಲಕಿಯನ್ನು ಕಳೆದ ಒಂದೂವರೆ ವರ್ಷದಿಂದ ಸತತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದು ಇದೀಗ ಆಕೆ ಗರ್ಭವತಿಯಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿ ರಮೇಶನನ್ನು ಕಡಬ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

2020ರ ಏಪ್ರಿಲ್ ತಿಂಗಳಿನಿಂದ ರಮೇಶ್ ಆಗಾಗ ಬಾಲಕಿಯ ಮನೆಗೆ ಬಂದು ಬಾಲಕಿಯ ಮೇಲೆ ಬಲತ್ಕಾರವಾಗಿ ಲೈಂಗಿಕ ದೌರ್ಜನ್ಯ ಎಸಗಿ ಯಾರಿಗೂ ತಿಳಿಸಬಾರದೆಂದು ಬಾಲಕಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದರಿಂದ ಈ ವಿಚಾರವನ್ನು ಬಾಲಕಿ ಯಾರಿಗೂ ತಿಳಿಸಿರಲಿಲ್ಲ. ಬಾಲಕಿ ಅಸ್ವಸ್ಥಗೊಂಡಿದ್ದು ತಪಾಸಣೆಗಾಗಿ ತನ್ನ ಅಜ್ಜಿಯೊಂದಿಗೆ ಕಡಬ ಸಮುದಾಯ ಆಸ್ಪತ್ರೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಗರ್ಭಿಣಿಯಾಗಿರುವ ವಿಚಾರ ವೈದ್ಯರಿಂದ ತಿಳಿದ ಬಳಿಕ ಹೆಚ್ಚಿನ ಪರೀಕ್ಷೆಗಾಗಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿ ಅಲ್ಲಿ ಪರೀಕ್ಷೆ ನಡೆಸಿದಾಗ ಬಾಲಕಿ ಒಂದೂವರೆ ತಿಂಗಳ ಗರ್ಭಿಣಿ ಎಂಬುದು ದೃಢಪಟ್ಟಿದೆ. ಬಳಿಕ ರಮೇಶ್ ವಿರುದ್ಧ ಬಾಲಕಿ ದೂರು ನೀಡಿದ್ದಾರೆ. ಕಡಬ ಪೋಲಿಸರು ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

- Advertisement -

Related news

error: Content is protected !!