Saturday, June 28, 2025
spot_imgspot_img
spot_imgspot_img

ಕಡಬ: ವಿದ್ಯಾರ್ಥಿಗೆ ಹುಚ್ಚು ನಾಯಿ ಕಡಿತ; ಆಸ್ಪತ್ರೆಗೆ ದಾಖಲು!

- Advertisement -
- Advertisement -

ಕಡಬ: ಇಲ್ಲಿನ ಕಡಬ ಪೇಟೆಯಲ್ಲಿ ಹುಚ್ಚುನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ.

vtv vitla
vtv vitla

ಮದರಸ ಬಿಟ್ಟು ತೆರಳುತ್ತಿದ್ದ ಬಾಲಕನ ಮೇಲೆ ಹುಚ್ಚು ನಾಯಿ ಎರಗಿದ್ದು, ಕೈಗೆ ಕಚ್ಚಿದೆ‌ ಎಂದು ತಿಳಿದುಬಂದಿದೆ. ಬಾಲಕನಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹುಚ್ಚು ನಾಯಿಯನ್ನು ಸಾರ್ವಜನಿಕರು ಹೊಡೆದು ಕೊಂದಿದ್ದು, ಈ ಬಗ್ಗೆ ಪಟ್ಟಣ ಪಂಚಾಯತ್ ಗೆ ಮಾಹಿತಿ ನೀಡಿದ್ದಾರೆ.

vtv vitla

- Advertisement -

Related news

error: Content is protected !!