Monday, August 31, 2026
spot_imgspot_img
spot_imgspot_img

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಸ್ಥಿತಿ ಗಂಭೀರ..!

- Advertisement -
- Advertisement -

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್​ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಅವರಿಗೆ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜೇಶ್​ ಅವರಿಗೆ 82 ವರ್ಷ ವಯಸ್ಸಾಗಿದೆ.

ಹಲವು ದಶಕಗಳಿಂದ ಚಿತ್ರರಂಗದಲ್ಲಿ ಅನುಭವ ಹೊಂದಿರುವ ಅವರು ಇತ್ತೀಚಿನ ವರ್ಷಗಳಲ್ಲಿ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ರಾಜೇಶ್​ ಅವರು ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಕಸ್ತೂರಬಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೆಂಟಿಲೇಟರ್​ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.

- Advertisement -

Related news

error: Content is protected !!