

ಬೆಂಗಳೂರು: ಸ್ಯಾಂಡಲ್ ವುಡ್ ಹಾಗೂ ಕಿರುತೆರೆಯಲ್ಲಿ ತಮ್ಮ ಅಭಿನಯದ ಮೂಲಕವೇ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಖ್ಯಾತ ನಟ ಮೋಹನ್ ಜುನೇಜಾ ವಿಧಿವಶರಾಗಿದ್ದರೆ.
ಅನಾರೋಗ್ಯದ ತೊಂದರೆಯಿಂದ ಹೆಸರು ಘಟ್ಟ ರಸ್ತೆಯ ಸಪ್ತಗಿರಿ ಹಾಸ್ಪಿಟಲ್ ನಲ್ಲಿ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಕೊನೆಯುಸಿರೆಳೆದಿದ್ದಾರೆ.
ಜೋಗಿ, ಕೆಜಿಎಫ್, ಕೆಜಿಎಫ್2, ನವಗ್ರಹ, ಸೇರಿದಂತೆ ಹಲವು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿದ್ದ ಕಲಾವಿದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ನೂರಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಮೋಹನ್ ಜುನೇಜಾ ಚೆಲ್ಲಾಟ ಚಿತ್ರದ ಮಧುಮಗ ಪಾತ್ರ ಮೋಹನ್ ಅವರಿಗೆ ಹೆಚ್ಚು ಖ್ಯಾತಿ ಕೊಟ್ಟಿತ್ತು. ಇದಾದ ನಂತರ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ಮೋಹನ ಹಾಸ್ಯ ನಟನಾಗಿ ಮಿಂಚಿದ್ದರು.
ಮೋಹನ್ ಅವರು ಬೆಂಗಳೂರು ಉತ್ತರ ತಾಲ್ಲೂಕಿನ ತಮ್ಮೇನಹಳ್ಳಿಯಲ್ಲಿ ವಾಸವಾಗಿದ್ದರು. ಮೋಹನ್ ಇತ್ತೀಚೆಗೆ ತೆರೆ ಕಂಡಿದ್ದ “ಕೆಜಿಎಫ್ ಚಾಪ್ಟರ್ 2” ಚಿತ್ರದಲ್ಲಿ ಕೂಡ ಅಭಿನಯಿಸಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.










