Sunday, June 29, 2025
spot_imgspot_img
spot_imgspot_img

ಕರುನಾಡಿಗೆ ಬಂದಿಳಿದ ಪ್ರಧಾನಿ ಮೋದಿ; ದಿಗ್ಗಜರಿಂದ ಅದ್ಧೂರಿ ಸ್ವಾಗತ

- Advertisement -
- Advertisement -

ಬೆಂಗಳೂರು: ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಯಲಹಂಕ ವಾಯುನೆಲೆಗೆ ಬಂದಿಳಿದಿದ್ದಾರೆ.

ಐಎಎಫ್ ನ ವಿಶೇಷ ವಿಮಾನದಲ್ಲಿ ಯಲಹಂಕ ಏರ್ ಬೇಸ್ ಗೆ ಬಂದಿಳಿದ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ವಾಗತಿಸಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.

ಇಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ ನಂತರ ಸಂಜೆ ಮೈಸೂರಿಗೆ ಪ್ರಯಾಣಿಸಿ ಚಾಮುಂಡಿ ಬೆಟ್ಟ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಮೈಸೂರಿನಲ್ಲೇ ವಾಸ್ತವ್ಯ ಹೂಡಿ ನಂತರ ಬೆಳಿಗ್ಗೆ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

- Advertisement -

Related news

error: Content is protected !!