Sunday, June 28, 2026
spot_imgspot_img
spot_imgspot_img

ಕಾಪು ಬ್ಲಾಕ್ ಯುವ ಕಾಂಗ್ರೆಸ್’ನ ಪ್ರಧಾನ ಕಾರ್ಯದರ್ಶಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು..!

- Advertisement -
- Advertisement -

ಪಡುಬಿದ್ರಿ: ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ’ಸೋಜಾ(35) ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.

vtv vitla

ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿತದ ಚಟ ಹೊಂದಿದ್ದ ನೆರೆಮನೆಯ ವಿನಯ (36) ಎಂಬ ವ್ಯಕ್ತಿಯು ಕ್ಷುಲ್ಲಕ ಕಾರಣಗಳಿಗಾಗಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.

ತನ್ನ ಮನೆ ಬಳಿ ಓರ್ವರೊಂದಿಗೆ ಮಾತನಾಡುತ್ತಿದ್ದಾಗ ಏಕಾಏಕಿ ಬಂದ ವ್ಯಕ್ತಿ ಹೊಟ್ಟೆಗೆ ಇರಿದಿದ್ದಾನೆ. ಇನ್ನು ಪಡುಬಿದ್ರೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ರೀನಾ ಅವರಿಗೆ ಶಸ್ತ್ರಚಿಕಿತ್ಸೆ ನಡೆದಿದ್ದು, ಪೋಲಿಸರು ಅವರ ಹೇಳಿಕೆಯನ್ನು ಇನ್ನಷ್ಟೆ ಪಡೆದುಕೊಳ್ಳಬೇಕಿದೆ.

- Advertisement -

Related news

error: Content is protected !!