Monday, June 8, 2026
spot_imgspot_img
spot_imgspot_img

ಕಾರ್ಕಳ: 5.50 ಲಕ್ಷ ಮೌಲ್ಯದ ಆಭರಣ ದೋಚಿದ ಆರೋಪಿಯ ಬಂಧನ

- Advertisement -
- Advertisement -

ಕಾರ್ಕಳ: ನಿಟ್ಟೆ ಗ್ರಾಮದ ಕೈಲಾಜೆ ಪಾದೆಮನೆ ಎಂಬ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಮಾರುತಿ ನಗರದ ನಿವಾಸಿ ಚಂದ್ರಗೌಡ ಪಾಟೀಲ್ (56) ಬಂಧಿತ ಆರೋಪಿ. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ರಾಘವೇಂದ್ರ ಭಟ್ ರವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಕಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಮತ್ತು ಸಿಬ್ಬಂದಿಗಳ ತಂಡವು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಯಿಂದ 5.50 ಲಕ್ಷ ಮೌಲ್ಯದ ಆಭರಣಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!