- Advertisement -
- Advertisement -


ಮಂಡ್ಯ: ಐಟಿಐ ಕಾಲೇಜು ಪ್ರಾಂಶುಪಾಲರಿಗೆ ಜೆಡಿಎಸ್ ಶಾಸಕ ಶ್ರೀನಿವಾಸ್ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಐಟಿಐ ಕಾಲೇಜಿನ ಉನ್ನತೀಕರಿಸಿದ ಕಾಲೇಜು ಉದ್ಘಾಟನೆ ಕಾರ್ಯಕ್ರಮದ ವೇಳೆ ಕಾಲೇಜು ಪ್ರಾಂಶುಪಾಲ ನಾಗಾನಂದ್ ಅವರ ಕಪಾಳಕ್ಕೆ ಶಾಸಕ ಶ್ರೀನಿವಾಸ್ ಹೊಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಾಂಶುಪಾಲರು ಕಾಲೇಜಿನ ವ್ಯವಸ್ಥೆ ಬಗ್ಗೆ ಸರಿಯಾಗಿ ಮಾಹಿತಿ ನೀಡಿಲ್ಲ ಹಾಗೂ ಕಾಲೇಜಿನಲ್ಲಿ ಮೂಲಭೂತ ಸೌಲಭ್ಯ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕೆ ಪ್ರಿನ್ಸಿಪಾಲ್ ಗೆ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಶಾಸಕರ ದರ್ಪ, ದುರಹಂಕಾರಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಾಲೇಜಿನ ಪ್ರಿನ್ಸಿಪಾಲ್ ನಾಗಾನಂದ್ ಮಾತನಾಡಿ ತಪ್ಪು ಮಾಡದೇ ಹೊಡೆಸಿಕೊಂಡೆ. ಯಾಕಾದ್ರೂ ಈ ಕೆಲಸಕ್ಕೆ ಸೇರಿಕೊಂಡೆ ಎಂದು ತನ್ನ ಅಳಲು ತೋಡಿಕೊಂಡಿದ್ದಾರೆ.
- ಕರ್ನಾಟಕ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆ: ಡಿ.ಕೆ. ಶಿವಕುಮಾರ್ ಹಣಕಾಸು, ಪ್ರಿಯಾಂಕ್ ಖರ್ಗೆಗೆ ಗೃಹ ಖಾತೆ
- ಅಕ್ರಮ ಜಾನುವಾರು ಸಾಗಾಟ: ಮೂವರ ವಿರುದ್ಧ ಪ್ರಕರಣ ದಾಖಲು
- ಬೆಂಗಳೂರು: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯ ಬಂಧನ
- ಸೌರಶಕ್ತಿಯಲ್ಲಿ ಅಮೆರಿಕಾವನ್ನೇ ಮೀರಿಸಿ, ಜಾಗತಿಕವಾಗಿ 2ನೇ ಸ್ಥಾನಕ್ಕೇರಿದ ಭಾರತ – ಪ್ರಹ್ಲಾದ್ ಜೋಶಿ
- ನೆಹರು ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಲು ಮುಂದಾದ ಪ್ರಧಾನಿ ಮೋದಿ!

- Advertisement -








