- Advertisement -
- Advertisement -
ಕುಂದಾಪುರ: ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಆಯುಧವೊಂದರಲ್ಲಿ ಹಲ್ಲೆ ನಡೆಸಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಕೊರ್ಗಿ-ಹೆಸ್ಕುತ್ತೂರು ತಿರುವಿನ ಬಳಿ ವೇಳೆ ನಡೆದಿದೆ.
ಕೊರ್ಗಿ ಗ್ರಾಪಂ ವ್ಯಾಪ್ತಿಯ ಕಾಡಿನಬೆಟ್ಟು ನಿವಾಸಿ ದೇವಕಿ(32) ಎಂಬವರು ಹಲ್ಲೆಗೊಳಗಾದ ಮಹಿಳೆ.
ತೆಕ್ಕಟ್ಟೆ-ದಬ್ಬೆಕಟ್ಟೆ ಮುಖ್ಯ ರಸ್ತೆಯ ಸಮೀಪದಲ್ಲಿ ಶಾಲಾ ವಾಹನದಲ್ಲಿ ಬರುವ ತನ್ನ ಮಗುವಿಗಾಗಿ ಕಾಯುತ್ತಿದ್ದರು. ಆಗ ಬಂದ ವ್ಯಕ್ತಿಯೊಬ್ಬ ಮಹಿಳೆಯ ತಲೆಗೆ ಮಾರಕಾಯುಧದಿಂದ ಹಲ್ಲೆ ನಡೆಸಿ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದಾನೆ.
ಇದರಿಂದ ಗಂಭೀರವಾಗಿ ಗಾಯಗೊಂಡ ದೇವಕಿ ಅವರನ್ನು ಮೊದಲು ಕೋಟೇಶ್ವರ ಖಾಸಗಿ ಆಸ್ಪತ್ರೆ ಗೆ ಕರೆದೊಯ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆಕುಂದಾಪುರ ಗ್ರಾಮಾಂತರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
- Advertisement -