Monday, August 31, 2026
spot_imgspot_img
spot_imgspot_img

ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ; ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್

- Advertisement -
- Advertisement -
suvarna gold

ಬೆಂಗಳೂರು: ಕೆಲಸ ಕೊಡಿಸುವುದಾಗಿ ಗೆಳತಿಯನ್ನು ನಂಬಿಸಿ ಆಕೆಯನ್ನು ಕಾರ್ ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ನೆಲಮಂಗಲ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ಬೆಂಗಳೂರು ಉತ್ತರ ತಾಲೂಕಿನ ದೊಡ್ಡಬಿದರಕಲ್ಲು ನಿವಾಸಿ ಹರ್ಷ ಗೌಡ(27) ಎನ್ನಲಾಗಿದೆ.

vtv vitla

ಈತ ಫ್ಯಾಶನ್ ಡಿಸೈನರ್ ಆಗಿರುವ ಯುವತಿಗೆ ಹೆಚ್ಚಿನ ವೇತನದ ಉದ್ಯೋಗ ಕೊಡಿಸುವುದಾಗಿ ನಂಬಿಸಿದ್ದಾನೆ. ಅದರಂತೆ ಜನವರಿ 16 ರಂದು ಸ್ನೇಹಿತರಿಗೆ ಹೇಳಿ ಕೆಲಸ ಕೊಡಿಸುವುದಾಗಿ ರೆಸ್ಟೋರೆಂಟ್ ವೊಂದಕ್ಕೆ ಕರೆಸಿಕೊಂಡಿದ್ದಾನೆ.

ಬಳಿಕ ತನ್ನ ಐಷಾರಾಮಿ ಕಾರ್ ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಕೃತ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ತನಗೆ ನಿರಂತರವಾಗಿ ಲೈಂಗಿಕವಾಗಿ ಸಹಕರಿಸಬೇಕು. ಇಲ್ಲದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಸಿದ್ದಾನೆ. ಈ ಘಟನೆ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

Related news

error: Content is protected !!