Tuesday, September 1, 2026
spot_imgspot_img
spot_imgspot_img

ಕೊಡಗಿನಲ್ಲಿ ಮತ್ತೆ ಕೊರೊನಾ ಆತಂಕ; ಒಂದೇ ಶಾಲೆಯ 21 ಮಕ್ಕಳಿಗೆ ಪಾಸಿಟಿವ್..!

- Advertisement -
- Advertisement -

ಕೊಡಗು: ಜಿಲ್ಲೆಯಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ಮಡಿಕೇರಿಯ ಗಾಳಿಬೀಡು ಸಮೀಪದ ನವೋದಯ ವಸತಿ ಶಾಲೆಯಲ್ಲಿ 21 ಮಕ್ಕಳಿಗೆ ಕೊರೊನಾ ಪಾಸಿಟಿವ್ ಆಗಿದ್ದು ಪೋಷಕರಲ್ಲಿ ಆತಂಕ ಸೃಷ್ಟಿಯಾಗಿದೆ.

ಕೊರೊನಾ ಪಾಸಿಟಿವ್ ಬಂದ 21 ಮಕ್ಕಳನ್ನು ಮಡಿಕೇರಿ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗ್ತಿದೆ. ಒಟ್ಟು 270 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ 21 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ ಎನ್ನಲಾಗಿದೆ.

ಕಳೆದೊಂದು ವಾರದಿಂದ ಮಕ್ಕಳಲ್ಲಿ ಕೆಮ್ಮು ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಕೋವಿಡ್ ಲಕ್ಷಣವಿದ್ದ 139 ಮಕ್ಕಳಿಗೆ ಟೆಸ್ಟ್ ಮಾಡಲಾಗಿತ್ತು.

- Advertisement -

Related news

error: Content is protected !!