Monday, July 7, 2025
spot_imgspot_img
spot_imgspot_img

ಗೃಹ ಸಚಿವ ಅಮಿತ್ ಶಾ ರನ್ನು ಭೇಟಿಯಾದ ಸಂಸದ ನಳಿನ್‌ಕುಮಾರ್ ಕಟೀಲು; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಭೇಟಿಯಾಗಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್ಐಎಗೆ ವಹಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಪ್ರವೀಣ್ ಹತ್ಯೆ ಪ್ರಕರಣದ ತನಿಖೆಯಲ್ಲಿ ವಿಶೇಷ ಕಾಳಜಿ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಎನ್ಐಎಯನ್ನು ಬಲಗೊಳಿಸುವುದರೊಂದಿಗೆ ಎನ್ಐಎಗೆ ವಹಿಸಿರುವ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಅಪರಾಧ ಕೃತ್ಯ ಎಸಗುವವರಿಗೆ ಕಠಿಣ ಸಂದೇಶವನ್ನು ನೀಡಲಾಗುವುದು. ಎನ್ಐಎ ಅಧಿಕಾರಿಗಳಿಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸುವುದಾಗಿ ಗೃಹ ಸಚಿವ ಅಮಿತ್ ಶಾ ಅವರು ಈ ವೇಳೆ ಭರವಸೆ ನೀಡಿದರು.

- Advertisement -

Related news

error: Content is protected !!