Wednesday, August 5, 2026
spot_imgspot_img
spot_imgspot_img

ಚಾರ್ಮಾಡಿ ಘಾಟಿಯಲ್ಲೂ ಉಂಟಾದ ಭೂ ಕುಸಿತ

- Advertisement -
- Advertisement -

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ವಿಪರಿತ ಮಳೆಯಾದ ಕಾರಣ ಶಿರಾಡಿ ಘಾಟ್‌ನಲ್ಲಿ ಭೂ ಕುಸಿತ ಉಂಟಾಗಿತ್ತು. ಇದೀಗಾ ಚಾರ್ಮಾಡಿ ಘಾಟ್ ಪ್ರದೇಶದಲ್ಲೂ ಭೂಕುಸಿತ ಉಂಟಾದ ಘಟನೆ ನಡೆದಿದೆ..

ಚಾರ್ಮಾಡಿ ಘಾಟ್‌ನ ಏಳನೇ ತಿರುವಿನಲ್ಲಿ ಸಣ್ಣ ಮಟ್ಟದ ಭೂಕುಸಿತ ಉಂಟಾದ ಕಾರಣ ಅಧಿಕಾರಿಗಳು ತ್ವರಿತವಾಗಿ ಪರಿಶೀಲನೆಗೆ ಮುಂದಾಗಿದ್ದಾರೆ. ಯಾವುದೇ ಸಂದರ್ಭದಲ್ಲಿಯೂ ಭೂಕುಸಿತ ಹೆಚ್ಚಾಗುವ ಸಾಧ್ಯತೆ ಇದ್ದು ಬೆಳ್ತಂಗಡಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಪೂರ್ವ ಸಿದ್ದತೆಯೊಂದಿಗೆ ಚಾರ್ಮಾಡಿ ಘಾಟಿಯಲ್ಲಿ ಠಿಕಾಣಿ ಹೂಡಿದ್ದಾರೆ.

ಚಾರ್ಮಾಡಿ ಫಾರೆಸ್ಟರ್ ರವೀಂದ್ರ ಅಂಕಲಗಿ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಬೆಳ್ತಂಗಡಿ ತಹಶಿಲ್ದಾರ್ ಮಹೇಶ್.ಜೆ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

driving
- Advertisement -

Related news

error: Content is protected !!