Wednesday, August 5, 2026
spot_imgspot_img
spot_imgspot_img

ಜ.31ರಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭ

- Advertisement -
- Advertisement -

ನವದೆಹಲಿ: ಸಂಸತ್ತಿನ 2023ನೇ ಸಾಲಿನ ಬಜೆಟ್ ಅಧಿವೇಶನವು ಜನವರಿ 31 ರಿಂದ ಪ್ರಾರಂಭವಾಗಿ ಏಪ್ರಿಲ್ 6 ರಂದು ಕೊನೆಗೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದು,ಬಜೆಟ್ ಅಧಿವೇಶನದ ಮೊದಲ ದಿನದಂದು ಎರಡೂ ಸದನಗಳಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ.

ಇನ್ನು ಸಂಸತ್ತಿನ ಬಜೆಟ್ ಅಧಿವೇಶನದ ಆರಂಭವು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ ಭಾಷಣದೊಂದಿಗೆ ಸಂಭವಿಸುವ ಸಾಧ್ಯತೆಯಿದೆ.

- Advertisement -

Related news

error: Content is protected !!