Thursday, June 18, 2026
spot_imgspot_img
spot_imgspot_img

ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಕೊರೊನಾ ವಾರಿಯರ್ಸ್ ಗಳಿಗೆ ಸನ್ಮಾನ

- Advertisement -
- Advertisement -

ಅಂಕೋಲಾ: ದೇಶವ್ಯಾಪಿ ಕೋಲಾಹಲಕ್ಕೆ ಕಾರಣವಾಗಿರುವ ಕೋವಿಡ್ ನಿಯಂತ್ರಣಕ್ಕೆ ಆರೋಗ್ಯ ಕಾರ್ಯಕರ್ತರು ಅವಿರತ ಶ್ರಮದಿಂದ ದುಡಿಯುತ್ತಿದ್ದಾರೆ. ಅವರನ್ನು ಸೂಕ್ತವಾಗಿ ಪ್ರೋತ್ಸಾಹಿಸಿ ಗೌರವಿಸುವ ಜವಾಬ್ದಾರಿ ನಮ್ಮೆಲ್ಲರದಾಗಿದೆ ಎಂದು ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ದಿಲೀಪ್ ಅರ್ಗೆಕರ ಹೇಳಿದರು.

ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಮತ್ತು ತಾಲೂಕು ಸಮಿತಿಯಿಂದ ತಾಲ್ಲೂಕಿನ ಹಾರವಾಡ ಗ್ರಾಮದಲ್ಲಿ ಸ್ವಾತಂತ್ರ‍್ಯ ದಿನಾಚರಣೆಯ ನಿಮಿತ್ತ ಕರೋನಾ ವಾರಿಯರ್ಸ್ ಗಳಿಗೆ ಸನ್ಮಾನಿಸಿ ಮಾತನಾಡಿದರು.

ಕಳೆದ ಎರಡು ವರ್ಷಗಳಿಂದ ಕೋವಿಡ್ ಮಹಾಮಾರಿ ದೇಶವನ್ನು ಕಾಡುತ್ತಿದೆ. 75ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮವನ್ನು ಕಸಿದುಕೊಂಡಿದೆ. ಇಂತಹ ಸಂದರ್ಭದಲ್ಲಿಯೂ ಜೀವದ ಹಂಗು ತೊರೆದು ಕೋವಿಡ್ ನಿಯಂತ್ರಣಕ್ಕೆ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ, ಸುಭಾಸ್ ನಾಯ್ಕ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿಗಳನ್ನು ಗುರುತಿಸಿ ಗೌರವಿಸುವ ಕಾರ್ಯ ಜಯ ಕರ್ನಾಟಕ ಜನಪರ ವೇದಿಕೆಯಿಂದ ಆಯೋಜಿಸಲಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯವರೆಗೂ ವೇದಿಕೆ ಸೇವೆಯನ್ನು ನೀಡಲು ಸಿದ್ಧವಾಗಿದೆ. ಜಿಲ್ಲಾಧ್ಯಕ್ಷ ದಿಲೀಪ ಅರ್ಗೆಕರ ಇಂತಹ ವಿಧಾಯಕ ಕಾರ್ಯಗಳಿಗೆ ಸದಾ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು.

ಹಾರವಾಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಧುಕರ ನಾಯಕ ಮಾತನಾಡಿ, ಜಯಕರ್ನಾಟಕ ಜನಪರ ವೇದಿಕೆ ಕೊರೊನಾ ವಾರಿಯರ್ಸ್ ಸೇವೆಯನ್ನು ಗುರುತಿಸಿ ಗೌರವಿಸುತ್ತಿರುವುದು ನಮಗೆ ಹೆಮ್ಮೆ ತಂದಿದೆ ಎಂದರು.

ಪುಷ್ಪ ಕುಮಟೆಕರ, ಸುಷ್ಮಾ ಕಲ್ಗುಟ್ಕರ, ಪ್ರೀತಿ ಕುಡ್ತಾಳಕರ, ಸುನಿತಾ ನಾಯ್ಕ, ರೇಣುಕಾ ಗೌಡ, ಲಲಿತಾ ಸಾವಂತ, ಅರ್ಚನ ಹರಿಕಂತ್ರ, ರೇಖಾ ಗೌಡ, ರಂಜನಾ ನಾಯ್ಕ, ಚಂದ್ರಕಲಾ ದುರ್ಗೆಕರ , ಪ್ರಜ್ಞಾ ನಾಯ್ಕ, ರಜನಿ ತಾಂಡೇಲ್ ಸೇರಿದಂತೆ 12 ಜನ ಕಾರ್ಯಕರ್ತೆಯರಿಗೆ ಸನ್ಮಾನಿಸಿ ನೆನಪಿನ ಕಾಣಿಕೆ ಜೊತೆಗೆ ಗೌರವ ಸಹಾಯಧನ ನೀಡಲಾಯಿತು.

ಹಾರವಾಡ ಗ್ರಾಮ ಪಂಚಾಯಿತಿ ಸದಸ್ಯರಾದ ಆನಂದಿ ಆಗೇರ, ದಿವ್ಯ ತಾರಿ, ಮಲ್ಲಿಕಾ ಬಲೇಗಾರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಜಯ ಕರ್ನಾಟಕ ಜನಪರ ಸಂಘಟನೆಯ ಜಿಲ್ಲಾ ಕಾರ್ಯಧ್ಯಕ್ಷ ರೋಷನ್ ಹರಿಕಂತ್ರ, ಯುವ ಕಾರ್ಯದರ್ಶಿ ರಾಜು ತಾಂಡೇಲ, ಅಂಕೋಲಾ ತಾಲೂಕು ಅಧ್ಯಕ್ಷ ವಿಜ್ಞೇಶ ನಾಯ್ಕ, ಮಹಿಳಾ ಅಧ್ಯಕ್ಷೆ ನಿರ್ಮಲಾ ನಾಯ್ಕ, ಹಾರವಾಡ ಗ್ರಾಮೀಣ ಯುವ ಘಟಕ ಅಧ್ಯಕ್ಷರು ಸಾಯಿನಾಥ್ ಎಂ ಗೌಡ. ಕಾರ್ಯಧ್ಯಕ್ಷ ಮಂಜುನಾಥ ನಾಯ್ಕ್, ಪ್ರಧಾನ ಕಿರಣ್ ಗಾಂವಕರ, ತಾಲ್ಲೂಕು ಉಪಾಧ್ಯಕ್ಷರಾದ ವಿಜಯ ರಾಯ್ಕರ್ ,ತಾಲ್ಲೂಕು ಕಾರ್ಯದರ್ಶಿ ಅಬ್ದುಲ್ ಶೇಖ್ , ಸ್ಥಳೀಯ ಮುಖಂಡರಾದ ಪ್ರವೀಣ್ ತಾಂಡೇಲ, ವಿನಾಯಕ ಹರಿಕಂತ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು .

driving
- Advertisement -

Related news

error: Content is protected !!