Tuesday, July 28, 2026
spot_imgspot_img
spot_imgspot_img

ದತ್ತಪೀಠದಲ್ಲಿನ ಅನಗತ್ಯ ಘೋರಿಗಳನ್ನು ಸ್ಥಳಾಂತರ ಮಾಡಲು ಸಚಿವ ಸುನೀಲ್ ಕುಮಾರ್ ಖಡಕ್ ಸೂಚನೆ!

- Advertisement -
- Advertisement -

ಚಿಕ್ಕಮಗಳೂರು: ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ಪೂಜಾ ಕೈಂಕರ್ಯಕ್ಕೆ ಅರ್ಚಕರ ನೇಮಕಕ್ಕೆ ಅವಕಾಶ ನೀಡಿ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಇದೀಗ ದತ್ತಪೀಠದ ಸುತ್ತಮುತ್ತಲಿನ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಘೋರಿಗಳನ್ನು ಸ್ಥಳಾಂತರ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಆದೇಶ ನೀಡಿದ್ದಾರೆ.

ದತ್ತಪೀಠದಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ಮಾಡಿಕೊಡಬೇಕು. ಈ ಹಿನ್ನೆಲೆಯಲ್ಲಿ ದತ್ತಪೀಠದಲ್ಲಿ ಅನಗತ್ಯವಾಗಿ ನಿರ್ಮಾಣ ಮಾಡಿರುವ ಘೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರ ಮಾಡುವಂತೆ ಸೂಚಿಸಿದ್ದೇನೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ದತ್ತಪೀಠದಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಕೋರ್ಟ್ ಅವಕಾಶ ನೀಡಿರುವುದು ಸ್ವಾಗತಾರ್ಹ. ದತ್ತಾತ್ರೇಯ ಪೀಠ ಬೇರೆ, ನಾಗೇನಹಳ್ಳಿಯಲ್ಲಿರುವ ಬಾಬಾಬುಡನ್ ದರ್ಗಾ ಬೇರೆ. ಈ ವಿಚಾರ ದಾಖಲೆಗಳಲ್ಲೂ ಸಾಬೀತಾಗಿದೆ. ಹೀಗಾಗಿ ದತ್ತಪೀಠದಲ್ಲಿ ಹಿಂದೂಗಳಿಂದ ಪೂಜೆ ನಡೆಯಬೇಕಿದೆ ಎಂದರು. ಮುಸ್ಲಿಮರು ನಿಮ್ಮ ನಾಗೇನಹಳ್ಳಿ ದರ್ಗಾವನ್ನು ಅಭಿವೃದ್ಧಿಗೊಳಿಸಿ. ದತ್ತಪೀಠದಲ್ಲಿನ ಅನಗತ್ಯ ಘೋರಿಗಳನ್ನು ಸ್ಥಳಾಂತರ ಮಾಡಲು ಸೂಚಿಸಿದ್ದೇನೆ ಎಂದು ಹೇಳಿದರು.

- Advertisement -

Related news

error: Content is protected !!