Sunday, June 21, 2026
spot_imgspot_img
spot_imgspot_img

ದಲಿತ ಮಹಿಳೆಯನ್ನು ಅತ್ಯಾಚಾರಗೈದು ಬೆಂಕಿ ಹಚ್ಚಿ ಕೊಲೆಗೈದ ಯುವಕ

- Advertisement -
- Advertisement -

ದಲಿತ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿ ಕೊಲೆಗೈದಿರುವ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. ಶಕೂರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಆರೋಪಿ ಶಕೂರ್ 30 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ಮೈಮೇಲೆ ರಾಸಾಯನಿಕ ಸುರಿದು ನಂತರ ಬೆಂಕಿ ಹಚ್ಚಿದ್ದಾನೆ. ಸುಟ್ಟ ಗಾಯಗಳಾಗಿರುವ ಮಹಿಳೆಗೆ ಜೋಧ್‌ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆಕೆ ಚಿಕಿತ್ಸೆ ಫಲಕರಿಯಾಗದೆ ಮೃತಪಟ್ಟಿದ್ದಾಳೆ.

ಭಾರತೀಯ ದಂಡ ಸಂಹಿತೆ (IPC) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

- Advertisement -

Related news

error: Content is protected !!