- Advertisement -
- Advertisement -
ಬೆಂಗಳೂರು: ಕಾಲ್‌ಸೆಂಟರ್ ಉದ್ಯೋಗಿಗಳನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 12 ಗಂಟೆ ಒಳಗೆ ಪೊಲೀಸರು ಆರೋಪಿಗಳ ಬಂಧಿಸಿದ್ದಾರೆ. ಛಲಪತಿ, ಭರತ್, ಪವನ್, ಪ್ರಸನ್ನ, ಅತೀಕ್, ಜಬಿವುಲ್ಲ ಸೇರಿದಂತೆ 8 ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದು, ಆ ಪೈಕಿ ಛಲಪತಿ ಕೋಲಾರ ಜಿಲ್ಲೆಯ ಹೆಡ್‌ಕಾನ್‌ಸ್ಪೆಟೇಬಲ್ ಎಂದು ತಿಳಿದುಬಂದಿದೆ. ಆರೋಪಿಗಳು ಕೋರಮಂಗಲದಲ್ಲಿರುವ ಗ್ಲೋಬಲ್ ಕನೆಕ್ಸ್ ಟೆಲಿಕಾಂ ಪ್ರೈ.ಲಿ. ಸಂಸ್ಥೆಯ ನಾಲ್ವರು ಕಾಲ್ ಸೆಂಟರ್ ಉದ್ಯೋಗಿಗಳನ್ನು ಕಿಡ್ನಾಪ್ ಮಾಡಿದ್ದರು.
ಮಧ್ಯರಾತ್ರಿ ಕಾಲ್‌ಸೆಂಟರ್ ಬಳಿ ಹೋಗಿದ್ದ ಆರೋಪಿಗಳು, ನಾಲ್ವರು ಸಿಬ್ಬಂದಿಯನ್ನು ಕರೆದು ನಾವು ಪೊಲೀಸರು ಎಂದು ಬೆದರಿಸಿದ್ದರು. ಬಳಿಕ ಹವನ್, ರಾಜ್‌ವೀರ್, ಆಕಾಶ್, ಅನಸ್ ಎಂಬವರನ್ನು ಅಪಹರಣ ಮಾಡಿ 25 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಾಗೆ ಅಪರೇಷನ್ ಮ್ಯಾನೇಜರ್ ಅಕೌಂಟ್‌ನಿಂದ 18 ಲಕ್ಷ ರೂ. ವರ್ಗಾವಣೆ ಕೂಡ ಮಾಡಿಕೊಂಡಿದ್ದರು ಎನ್ನಲಾಗಿದೆ.

- Advertisement -








