Thursday, June 4, 2026
spot_imgspot_img
spot_imgspot_img

ನಿಯಂತ್ರಣ ತಪ್ಪಿದ ಬಸ್: 30 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

- Advertisement -
- Advertisement -

ಹೊರನಾಡು ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್​​, ಚಾಲಕನ ನಿಯಂತ್ರಣ ತಪ್ಪಿ ಬಸ್​​ನ ಒಂದು ಚಕ್ರ ಸೇತುವೆಯ ಕೆಳಗಿಳಿದಿದೆ. ಬಸ್​​ನಲ್ಲಿ 30 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಸುಂಕಸಾಲೆ ಬಳಿ ಚಾಲಕನ ನಿಯಂತ್ರಣ ತಪ್ಪಿ ksrtc ಬಸ್ ರಸ್ತೆಯಿಂದ ಬೇರೆಡೆಗೆ ಚಲಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!