Saturday, June 13, 2026
spot_imgspot_img
spot_imgspot_img

ನಿವೃತ್ತ ಅರಣ್ಯಾಧಿಕಾರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

- Advertisement -
- Advertisement -
vtv vitla

ಮಡಿಕೇರಿ: ಕೊಡಗಿನ‌ ವಿವಿಧೆಡೆ ರೇಂಜರ್ ಆಗಿ ಸೇವೆ ಸಲ್ಲಿಸಿದ್ದ, ನಿವೃತ್ತ ಅರಣ್ಯಾಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಶಾಲನಗರ ತಾಲ್ಲೂಕಿನ ಬಸವನತ್ತೂರಿನಲ್ಲಿ ನಡೆದಿದೆ. ಟಿ.ವಿ. ಶಶಿ (80ವ) ಎಂಬವರು ಸಾವಿಗೆ ಶರಣಾದವರು.

ಅವರು ತಮ್ಮ ಮನೆಯಲ್ಲೇ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ. ಶಶಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರಿಗೆ ಪ್ರಮುಖವಾಗಿ ನಿದ್ರಾ ಹೀನತೆ ಕಾಡುತ್ತಿತ್ತು. ತಮ್ಮ ಸಮಸ್ಯೆಗಳನ್ನು ಅವರು ಡೆತ್‌ ನೋಟ್‌ನಲ್ಲಿ ಬರೆದಿಟ್ಟಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!