- Advertisement -
- Advertisement -


ಮಂಗಳೂರು: ನೀಟ್, ಜೆಇಇ, ಸಿಇಟಿ ಪ್ರವೇಶ ಪರೀಕ್ಷೆ ಬರೆಯುವ ಬಡ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರದಿಂದಲೇ ಭರಿಸುವ ಚಿಂತನೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಈ ವರ್ಷ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ರೈತ ವಿದ್ಯಾನಿಧಿ ಪ್ರಾರಂಭಿಸಲಾಗಿದ್ದು, ವಿದ್ಯಾರ್ಥಿಗಳ ಫಲಿತಾಂಶ ಗಮನಿಸಿ, ಮೊತ್ತ ಹೆಚ್ಚಳಕ್ಕೆ ಯೋಚಿಸುತ್ತೇವೆ ಎಂದು ಹೇಳಿದ್ದಾರೆ.
ಈ ವರ್ಷ ಬಜೆಟ್ನಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿ ಮಾರ್ಗದರ್ಶಿ ಆಯಪ್ ಸಿದ್ಧಪಡಿಸಲಾಗಿದ್ದು, ಈ ಆಯಪ್ ಮೂಲಕ ಪರೀಕ್ಷೆ ಸಿದ್ಧತೆ ಕೈಗೊಳ್ಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.10 ಕೋಟಿ ಮೊತ್ತ ಮೀಸಲಿಡಲಾಗಿದ್ದು, ಬೈಜೂಸ್ ಜತೆ ಸೇರಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಿದೆ ಎಂದರು.

- Advertisement -








