- Advertisement -
- Advertisement -

ನೆಲ್ಯಾಡಿ: ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬ್ರೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಗುಂಡ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಹಾಗೂ ಎದುರಿನಿಂದ ಬರುತ್ತಿದ್ದ ತಮಿಳುನಾಡು ಮೂಲದವರಿದ್ದ ಬ್ರಿಝಾ ಕಾರು ನಡುವೆ ಗುಂಡ್ಯ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಐವರು ಗಂಭೀರ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.


- Advertisement -