Sunday, September 20, 2026
spot_imgspot_img
spot_imgspot_img

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ..! 1 ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತ

- Advertisement -
- Advertisement -

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಮೂರು ಘನ ವಾಹನಗಳು ಡಿಕ್ಕಿಯಾಗಿ ೧ ಗಂಟೆಗೂ ಅಧಿಕ ಸಂಚಾರ ಬಂದ್ ಆದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಕೆಎಸ್ಆರ್ಟಿಸಿ ಐರಾವತ ಬಸ್ಸು, ಮಿನಿ ಟ್ಯಾಂಕರ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ. ಘಟನೆಯಿಂದಾಗಿ ಮೂರೂ ವಾಹನಗಳು ಜಖಂಗೊಂಡಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಐರಾವತ ಬಸ್ಸು ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ನಡುವೆ ಬೆದ್ರೋಡಿ ತಿರುವಿನಲ್ಲಿ ಡಿಕ್ಕಿ ಸಂಭವಿಸಿದೆ. ಬಸ್ಸಿಗೆ ಡಿಕ್ಕಿಯಾದ ಲಾರಿ ಬಳಿಕ ಎದುರಿನಿಂದ ಬರುತ್ತಿದ್ದ ಟ್ಯಾಂಕರಿಗೂ ಡಿಕ್ಕಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ ರ ಕೈಗೆ ಗಾಜಿನ ಚೂರು ತಾಗಿ ಸಣ್ಣ ಪುಟ್ಟ ಗಾಯವಾಗಿರುವುದಾಗಿ ವರದಿಯಾಗಿದೆ. ಉಳಿದಂತೆ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದಿಂದಾಗಿ ಮೂರು ವಾಹನಗಳು ಹೆದ್ದಾರಿಯಲ್ಲಿ ನಿಂತಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು . ಸುಮಾರು 1 ತಾಸು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

- Advertisement -

Related news

error: Content is protected !!