Sunday, July 19, 2026
spot_imgspot_img
spot_imgspot_img

ಪಡಿತರ ಅಕ್ಕಿ ಕಳ್ಳಸಾಗಾಟ ಮಾಡುತ್ತಿದ್ದ ಲಾರಿ ಪೊಲೀಸ್ ವಶಕ್ಕೆ

- Advertisement -
- Advertisement -
vtv vitla
vtv vitla

ಮಂಡ್ಯ: ಮಂಡ್ಯದಲ್ಲಿ ಪಡಿತರ ಅಕ್ಕಿಯ ಅಕ್ರಮ ಮಾರಾಟ ದಂಧೆ ಮತ್ತೆ ಬೆಳಕಿಗೆ ಬಂದಿದೆ. ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಅಕ್ರಮವಾಗಿ ಪಡಿತರ ಅಕ್ಕಿಯ 150 ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿ ಪತ್ತೆಯಾಗಿದೆ. ರೈಸ್ ಮಿಲ್’ಗೆ ಪಡಿತರ ಅಕ್ಕಿಯನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಂಡ್ಯ ಪೊಲೀಸರು ಲಾರಿಯೊಂದನ್ನು ತಡೆದು ಪರಿಶೀಲನೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಲಾರಿಯಲ್ಲಿ 150 ಮೂಟೆ ಅಕ್ಕಿಯನ್ನು ಪಾಲಿಶ್ ಮಾಡಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದುದು ಪತ್ತೆಯಾಯಿತು. ಅಕ್ಕಿ ಮೂಟೆಗಳನ್ನು ವಾಹನದ ಸಮೇತ ಜಪ್ತಿಪಡಿಸಿಕೊಂಡಿರುವ ಪೊಲೀಸರು ಚಾಲಕನನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಡ್ಯ ಪಶ್ವಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!