Thursday, June 25, 2026
spot_imgspot_img
spot_imgspot_img

ಪಿಯುಸಿ ವಿದ್ಯಾರ್ಥಿನಿಯ ಮೃತದೇಹ ಬಾವಿಯಲ್ಲಿ ಪತ್ತೆ..!

- Advertisement -
- Advertisement -

ತಿರುವನಂತಪುರಂ: ವಿದ್ಯಾರ್ಥಿನಿಯೊಬ್ಬಳ ಮೃತದೇಹ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ತ್ರಿಸ್ಸೂರಿನಲ್ಲಿ ನಡೆದಿದೆ. ಮೃತ ಯುವತಿ ಜ್ಯೋತಿ ಪ್ರಕಾಶ್ ಮತ್ತು ರಜಿತಾ ದಂಪತಿ ಪುತ್ರಿ ಶಾಂತವನ(19) ಎನ್ನಲಾಗಿದೆ.

ಈಕೆ ಇರಿಂಜಲಕುಡ ನಿವಾಸಿಯಾಗಿದ್ದು, ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದಾಳೆ.

ಈಕೆ ಗುರುವಾರ 11.30ರ ಸುಮಾರಿಗೆ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಘಟನೆ ನಡೆದಾಗ ಶಾಂತವನ ಹೆತ್ತವರು ಮನೆಯಲ್ಲಿ ಇರಲಿಲ್ಲ. ಸ್ಥಳೀಯರು ಬಾವಿಯಲ್ಲಿ ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬಾವಿಯಿಂದ ಶಾಂತವನ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ನಂತರ ಮರಣೋತ್ತರ ಪರೀಕ್ಷೆಗೆ ತರರಿಸ್ಸೂರ್ ಮೆಡಿಕಲ್ ಕಾಲೇಜಿಗೆ ರವಾನಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಸಂಬಂಧ ಕಟ್ಟೂರು ಠಾಣಾ ಪೊಲೀಸರು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!