Saturday, June 28, 2025
spot_imgspot_img
spot_imgspot_img

ಪುತ್ತೂರು: ಅಕ್ರಮ ಮದ್ಯ ಮಾರಾಟ; 26,118 ರೂ. ಮೌಲ್ಯದ ಮದ್ಯ ವಶ

- Advertisement -
- Advertisement -

ಪುತ್ತೂರು: ಮನೆಯೊಂದರ ಬಳಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಪತ್ತೆ ಮಾಡಿದ ಪೊಲೀಸರು ಇಬ್ಬರನ್ನು ಬಂಧಿಸಿರುವ ಘಟನೆ ಕೆಮ್ಮಿಂಜೆ ಕಲ್ಲಗುಡ್ಡೆ ಎಂಬಲ್ಲಿ ನಡೆದಿದೆ.

ಮನೆಯೊಂದರಲ್ಲಿ ಕಳೆದ ಕೆಲ ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕುರಿತು ಮಾಹಿತಿ ಪಡೆದ ಪುತ್ತೂರು ನಗರ ಪೊಲೀಸರು ದಾಳಿ ನಡೆಸಿದ್ದು, ಪ್ರಕರಣಕ್ಕೆ ಸಂಬ0ಧಿಸಿದ0ತೆ ಗಣೇಶ್ ಮತ್ತು ಬಾಬು ಎಂಬವರನ್ನು ಬಂಧಿಸಿದ್ದಾರೆ.

ಅಕ್ರಮವಾಗಿ ದಾಸ್ತಾನಿರಿಸಲಾಗಿದ್ದ 26,118 ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!