Friday, June 19, 2026
spot_imgspot_img
spot_imgspot_img

ಪುತ್ತೂರು: ಅನಾರೋಗ್ಯದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೃತ್ಯು

- Advertisement -
- Advertisement -

ಪುತ್ತೂರು: ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದಿಂದಾಗಿ ಸಾವನ್ನಪ್ಪಿದ ಘಟನೆ ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ನಡೆದಿದೆ.

ಪುತ್ತೂರು ವಿಕ್ಟರ್ಸ್ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾ ರ್ಥಿನಿ, ನೆಲ್ಲಿಕಟ್ಟೆ ನಿವಾಸಿ ಸತೀಶ್‌ ಭಂಡಾರಿ ಹಾಗೂ ಚೇತನಾ ದಂಪತಿಗಳ ಪುತ್ರಿ ಹಿಮಾನಿ ಮೃತ ಬಾಲಕಿ.

ಹಿಮಾನಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಹಿನ್ನಲೆ ಖಾಸಗಿ ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!