Wednesday, September 9, 2026
spot_imgspot_img
spot_imgspot_img

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಗೆ ನ್ಯಾಯಾಂಗ ಬಂಧನ

- Advertisement -
- Advertisement -

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಬಂಧಿತ ಆರೋಪಿಯಾಗಿರುವ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ರವರಿಗೆ ಪುತ್ತೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ರವರನ್ನು ಪೊಲೀಸರು ಅ.25 ರಂದು ರಾತ್ರಿ ಬಂಧಿಸಿದ್ದರು.

ಅ.26 ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!