Sunday, June 7, 2026
spot_imgspot_img
spot_imgspot_img

ಪುತ್ತೂರು : ಕಾರು ಮತ್ತು ಬೈಕ್ ನಡುವೆ ಅಪಘಾತ; ನವದಂಪತಿಗೆ ಗಂಭೀರ ಗಾಯ

- Advertisement -
- Advertisement -

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್‌ನಲ್ಲಿದ್ದ ಅಡ್ಕಾರಿನ ನವದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಕೌಡಿಚಾರ್‌ನಲ್ಲಿ ನಡೆದಿದೆ.

ಜಾಲ್ಸೂರು ಗ್ರಾಮದ ಅಡ್ಕಾರು ಕೋನಡ್ಕಪದವಿನ ಸಂದೇಶ್ ಹಾಗೂ ಅವರ ಪತ್ನಿ ರಕ್ಷಿತಾ ಗಾಯಗೊಂಡವರು. ಇವರು ಬೈಕ್‌ನಲ್ಲಿ ಪುತ್ತೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಪುತ್ತೂರಿನಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರು ಮತ್ತು ಇವರ ಬೈಕ್ ನಡುವೆ ಡಿಕ್ಕಿ ಸಂಭವಿಸಿತ್ತು. ಬೈಕ್‌ನಲ್ಲಿದ್ದ ನವದಂಪತಿ ಬೈಕ್‌ನಿಂದ ರಸ್ತೆಗೆ ಎಸೆಯಲ್ಪಟ್ಟು, ಕಾಲಿಗೆ ಗಂಭೀರವಾಗಿ ಗಾಯಗೊಂಡರೆನ್ನಲಾಗಿದೆ. ಸ್ಥಳೀಯರು ಸೇರಿ ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಿ, ಅಲ್ಲಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!