- Advertisement -
- Advertisement -



ಪುತ್ತೂರು: ಇಲ್ಲಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಸಂಬಂಧ ಪಡದ ಸಂಘಟನೆ ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನ.24ರಂದು ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನೆ ಮುಗಿದ ಬೆನ್ನಲ್ಲೆ ವಿದ್ಯಾರ್ಥಿಗಳ ನಡುವೆ ಗಲಭೆ ನಡೆದು, ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಗುಂಪು ಸೇರುವಿಕೆಯನ್ನು ಚದುರಿಸಿದ್ದಾರೆ.



- Advertisement -








