Monday, June 30, 2025
spot_imgspot_img
spot_imgspot_img

ಪುತ್ತೂರು: ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ; ಆರೋಪಿ ಪೊಲೀಸ್‌ ವಶಕ್ಕೆ

- Advertisement -
- Advertisement -

vtv vitla

ಪುತ್ತೂರು: ಮಾದಕ ದ್ರವ್ಯ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಕಬಕ ಗ್ರಾಮದ ನೆಹರೂ ನಗರ ಕಲ್ಲೇಗ ಮಸೀದಿ ನಿವಾಸಿ ಮಹಮ್ಮದ್ ಆರೀಸ್ (32) ಎನ್ನಲಾಗಿದೆ.

ಪುತ್ತೂರು ನಗರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕರಾದ ಶ್ರೀಕಾಂತ್‌ ರಾಥೋಡ್‌ ಸಿಬ್ಬಂದಿಗಳಾದ ಜಗದೀಶ ಮತ್ತು ಶ್ರೀಮಂತರೊಂದಿಗೆ ರಾತ್ರಿ ಕರ್ತವ್ಯದಲ್ಲಿದ್ದ ವೇಳೆ ಪುತ್ತೂರು ಕಸಬಾ ಗ್ರಾಮದ ನೆಲ್ಲಿಗುಂಡಿ ಎಂಬಲ್ಲಿ ಸಾರ್ವಜನಿಕ ರಸ್ತೆಯಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತ ಸಾರ್ವಜನಿಕರನ್ನು ನಿಂದಿಸುತ್ತಿದ್ದ ಎಂಬ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ಮಾದಕ ದ್ರವ್ಯ ಗಾಂಜಾ ಸೇವನೆ ಕಂಡುಬಂದಿದ್ದು, ಸಂಶಯದಿಂದ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ದೃಢಪಟ್ಟಿದೆ.

ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!