Monday, July 27, 2026
spot_imgspot_img
spot_imgspot_img

ಪುನೀತ್‌ ರಾಜ್ ಕುಮಾರ್ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಘೋಷಣೆ

- Advertisement -
- Advertisement -

ಬೆಂಗಳೂರು: ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್‌ ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದ ಬೆನ್ನಲ್ಲೇ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿಯನ್ನೂ ಘೋಷಣೆ ಮಾಡಿದೆ.

ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ನೀಡುವ ಸಹಕಾರ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನಟ ಪುನೀತ್‌ ರಾಜ್‌ಕುಮಾರ್‌ಗೆ ನೀಡಲಾಗುವುದು. ನಂದಿನಿ ಹಾಲು ಉತ್ಪನ್ನಗಳಿಗೆ ಅವರು ರಾಯಭಾರಿಯಾಗಿದ್ದು, ಉಚಿತ ಸೇವೆ ಸಲ್ಲಿಸಿದ್ದರು. ಈ ಸೇವೆಯನ್ನು ಪರಿಗಣಿಸಿ ಸಹಕಾರ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.

ಕೆಂಗೇರಿ ಉಪನಗರದಲ್ಲಿ ಮಾರ್ಚ್ 20ರಂದು ಸಹಕಾರ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಪ್ರಶಸ್ತಿಯು 15 ಗ್ರಾಂ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದವರು ತಿಳಿಸಿದರು.

vtv vitla
vtv vitla
- Advertisement -

Related news

error: Content is protected !!